ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ, ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣವಪ್ಪ ಅಪ್ಪ, 8ನೇ ಪೀಠಾಧಿಪತಿಗಳು, ಶ್ರೀ ಶರಣಬಸವೇಶ್ವರ ಸಂಸ್ಥಾನ ಮತ್ತು ಮಾಜಿ ಅಧ್ಯಕ್ಷರು, ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ, ಇವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ಕೊಟ್ಟು ಪ್ರಪಂಚದ ಮೊದಲ ಪಾರ್ಲಿಮೆಂಟ್ ಪ್ರಾರಂಭವಾಗಿದ್ದು ಕಲ್ಯಾಣ ಕರ್ನಾಟಕದಲ್ಲಿ ಅಣ್ಣ ಬಸವಣ್ಣನವರ ನೇತೃತ್ವದಲ್ಲಿ. ಅಂತಹ ವಿಶ್ವ ಗುರು ಬಸವಣ್ಣ ಭಾರತದ ಶಕ್ತಿ ಕೇಂದ್ರ ಸಂಸತ್ತು ಮುಂದೆ ಇರಬೇಕೆಂದು ಬಯಸಿ ಸ್ವತಃ ಅದರ ಸಂಪೂರ್ಣ ಖರ್ಚು ವೆಚ್ಚ ಭರಿಸಿ ಸಂಸತ್ತಿನ 9 ನೇ ಗೇಟ್ ಮುಂದೆ ಬಸವಣ್ಣನ ಪುತ್ಥಳಿ ಸ್ಥಾಪಿಸಿ ಕಲ್ಯಾಣ ನಾಡಿನ ಕೀರ್ತಿಯನ್ನು ಹೆಚ್ಚಿಸಿದವರು, ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕಲ್ಯಾಣ ಕರ್ನಾಟಕದ ಕಲಬುರ್ಗಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗುಣಮಟ್ಟದ ಶೈಕ್ಷಣಿಕ ಕ್ರಾಂತಿಯ ಪಿತಾಮಹ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪ ಎಂದು ನುಡಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ, ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇಂದು ಕಲಬುರಗಿಯ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಆರ್. ಮೆಡಿಕಲ್ ಕಾಲೇಜು ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಮುತ್ಸದ್ದಿ ರಾಜಕಾರಣಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ದಿ. ಮಹಾದೇವಪ್ಪ ರಾಂಪುರೆ ಅವರ 104ನೇ ಜನ್ಮದಿನಾಚರಣೆ ಅಂಗವಾಗಿ ಅವರ ಸಮಾಧಿ ಸ್ಥಳದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶಿಲ್ ಜಿ ನಮೋಶಿ ಅವರಿಂದ ಪೂಜೆ ಸಲ್ಲಿಸಲಾಯಿತು ಹಾಗೂ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ
ಶ್ರೀ ರಾಜಾ ಭೀಮಳ್ಳಿ, ಕಾರ್ಯದರ್ಶಿಗಳಾದ ಶ್ರೀ ಉದಯ ಕುಮಾರ್ ಚಿಂಚೋಳಿ, ಜಂಟಿ - ಕಾರ್ಯದರ್ಶಿಗಳಾದ ಡಾ. ಕೈಲಾಸ ಪಾಟೀಲ, ಕಾಲೇಜು ಮತ್ತು ಆಸ್ಪತ್ರೆಯ ಸಂಚಾಲಕರಾದ ಡಾ. ಶರಣಬಸಪ್ಪ ಹಾರ್ವಾಳ ಮತ್ತು ಡಾ. ಕಿರಣ ದೇಶಮುಖ ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.